ಮಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಂಗಳೂರು ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳು & ಅನುದಾನದ ವಿವರಗಳ ಬಗ್ಗೆ ಚರ್ಚಿಸಲಾಯಿತು
ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಪಂಚಾಯತ್ ಸಿಇಓ ಡಾ. ಆನಂದ್. ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶಶಿಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಕಲ್ಲೇಶ್,ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ. ಜೆ. ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ರಾಜಶೇಖರ್. ಎ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.