24.4 C
Karnataka
Wednesday, March 5, 2025

ಫೆ. 24: ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ, ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

ಮ೦ಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂಗುರುತಿಸಿಕೊಂಡಿರುವ ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಫೆ.24 ರ೦ದು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದು ಬೆಳಗ್ಗೆ 10.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎ೦ದು ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷರಾದ ಡಾ ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿವಿಶ್ವಾಸವನ್ನು ಗಳಿಸಿದವರು. ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸಕ್ರಾಂತಿಯನ್ನು ಸೃಷ್ಟಿಸಿರುವ ಡಾ ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. . ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನುಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎ೦ದವರು ವಿವರಿಸಿದ್ದಾರೆ..
ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು. ಟಿ. ಖಾದರ್ ಫರೀದ್ ಅವರಿಂದ ಉದ್ಘಾಟನೆಗೊಳ್ಳಲಿದೆ.ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾಎಂ..ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿವಂದನಾ ಭಾಷಣ ಮಾಡಲಿರುವರು. 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳವಿತರಣೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದಅಧ್ಯಕ್ಷತೆ ವಹಿಸಲಿರುವರು.ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿಸುವಂತೆ ವಿನಂತಿಸುತ್ತಿದ್ದೇವೆ ಎ೦ದವರು ತಿಳಿಸಿದರು.
ಅಭಿವಂದನಾ ಸಮಿತಿಯ ಶಶಿಕುಮಾರ್‌ ರೈ ಬಾಲ್ಯೊಟ್ಟು, ವಿನಯ ಕುಮಾರ್‌ ಸೂರಿ೦ಜೆ, ಭಾಸ್ಕರ ಕೋಟ್ಯಾನ್‌, ಜೈರಾಜ್‌ ರೈ, ಜಯಕರ ಶೆಟ್ಟಿ ಇ೦ದ್ರಾಳಿ, ಗೋಪಿನಾಥ್‌ ಭಟ್‌ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles