26.5 C
Karnataka
Wednesday, January 8, 2025

ಎಸ್ ಸಿಡಿಸಿಸಿ ಬ್ಯಾಂಕ್ ನಿ೦ದ ಸವ೯ರ ಅಥಿ೯ಕ ಸಶಕ್ತೀಕರಣದ ಗುರಿ : ಡಾ.ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿದರು.
ಸಭಾ ಕಾಯ೦ಕ್ರಮವನ್ನದ್ದೇಶಿಸಿ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ ಬ್ಯಾಂಕ್ ಮಾತ್ರ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿರುವ ಜಿಲ್ಲೆಯಾಗಿದೆ. ಎಲ್ಲರಲ್ಲಿ ಅಥಿ೯ಕ ಸಶಕ್ತೀಕರಣ ಗುರಿ ಎಸ್ ಸಿಡಿಸಿಸಿ ಬ್ಯಾಂಕ್ ನ ಗುರಿಯಾಗಿದೆ. ಜಿಲ್ಲೆಯಲ್ಲಿ ಯಾವೊಬ್ಬ ಕೃಷಿಕ ಕೂಡಾ ಬ್ಯಾಂಕ್ ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡ ಉದಾಹರಣೆಗಳಿಲ್ಲ. ಹಾಗೆಯೇ ನಮ್ಮ ಜಿಲ್ಲೆಯಲ್ಲಿ ಶೇ 100ರಷ್ಟು ಕೃಷಿ ಸಾಲ ಮರುಪಾವತಿಯಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಬ್ಯಾಂಕ್ ಪ್ರಾಮಾಣಿಕ ಪ್ರಯತ್ನ ಪಡುತ್ತಿದೆ. 2025ಕ್ಕೆ ನಮ್ಮ ಸ್ವಸಹಾಯ ಗುಂಪುಗಳಿಗೆ 25 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಮತ್ತೆ ಹೊಸ ಸಮವಸ್ತ್ರವನ್ನು ಮಹಿಳೆಯರಿಗೆ ವಿತರಿಸಲಾಗುತ್ತದೆ. ಮಹಿಳೆಯರು ನಮ್ಮ ಬ್ಯಾಂಕ್ ನಿಂದ ಲೋನ್ ಪಡೆದು ಪುರುಷರಿಗೆ ಸರಿಸಮಾನವಾಗಿ ಬೆಳೆದಿದ್ದಾರೆ ಆರ್ಥಿಕವಾಗಿ ಸಶಕ್ತರಾಗಿ ಸ್ವಾವಲಂಬನೆಯ ಜೀವನ ಸಾಗಿಸುತ್ತಿದ್ದಾರೆ. ಬ್ಯಾಂಕ್ ನಲ್ಲಿ ಗ್ರಾಹಕರಿಗೆ ವಿನೂತನ ಸೇವೆಯನ್ನು ಒದಗಿಸುವ ದೃಷ್ಟಿಯಿಂದ ಹೊಸ ಶಾಖೆಗೆ ಸ್ಥಳಾಂತರ ಮಾಡಲಾಗಿದೆ. ಕಲ್ಲಡ್ಕದ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಿ“ ಎಂದರು.
ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತಾಡಿ, ”ಬೆಳೆಯುತ್ತಿರುವ ಕಲ್ಲಡ್ಕದಲ್ಲಿ ಇಂತಹ ಗ್ರಾಹಕ ಸ್ನೇಹಿಯಾದ ಸುಸಜ್ಜಿತ ಬ್ಯಾಂಕ್ ನ ಅವಶ್ಯಕತೆ ಇತ್ತು. ಗ್ರಾಹಕರು ಬ್ಯಾಂಕ್ ನ ಎಲ್ಲ ಸೇವೆಯನ್ನು ಬಳಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿ“ ಎಂದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮಾತಾಡಿ, ”ಕಲ್ಲಡ್ಕ ಬೆಳೆಯುತ್ತಿದೆ. 15ರಷ್ಟು ಬ್ಯಾಂಕ್, ಫೈನಾನ್ಸ್ ಗಳು ಇಲ್ಲಿವೆ. ಕಲ್ಲಡ್ಕದಲ್ಲಿ ಪ್ರಾರಂಭಗೊಂಡಿರುವ ನೂತನ ಶಾಖೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ. ಆ ಮೂಲಕ ಕಲ್ಲಡ್ಕಕ್ಕೆ ಇನ್ನಷ್ಟು ಒಳ್ಳೆಯ ಹೆಸರು ಬರಲಿ“ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಶಾಖಾ ಕಟ್ಟಡದ ಮಾಲಕ ವರದರಾಯ ಪ್ರಭು, ಬ್ಯಾಂಕ್ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಜಯರಾಮ್ ರೈ, ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬೊಳ್ಯೊಟ್ಟು, ಪ್ರಧಾನ ಕಾರ್ಯ ನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.
ಬ್ಯಾಂಕಿನ ಹಿರಿಯ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ದಿನೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಶಾಖೆಯು ಸಂಪೂರ್ಣ ಗಣಕೀಕೃತಗೊಂಡಿದ್ದು ಆರ್ ಟಿಜಿಎಸ್, ನೆಫ್ಟ್, ರೂಪೇ ಕಾರ್ಡ್ ಸೌಲಭ್ಯ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಕಾರ್ಯ ನಿರ್ವಹಿಸಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles