25.1 C
Karnataka
Friday, April 18, 2025

ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರ

ಮಂಗಳೂರು: ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ ಮಾತೃಸಂಘದ ಅಮೃತೋತ್ಸವ ಕಟ್ಟಡದ ಸಭಾಭವನದಲ್ಲಿ ನೆರವೇರಿಸುವುದೆಂದು ತೀರ್ಮಾನಿಸಲಾಗಿದೆ.
ಈ ಬಗ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಂಕಪಟ್ಟಿ, ಆಧಾರ್ ಕಾರ್ಡ್‌ನ ಪ್ರತಿ ಮತ್ತು ಒಂದು ಭಾವಚಿತ್ರ ಸಮೇತ ಬಂಟರ ಯಾನೆ ನಾಡವರ ಮಾತೃಸಂಘದ ಕಛೇರಿ, ಒಂದನೇ ಮಹಡಿ, ಅಮೃತೋತ್ಸವ ಕಟ್ಟಡ ಮಂಗಳೂರು, ಇಲ್ಲಿ ಜುಲೈ ತಿಂಗಳ 31ನೇ ತಾರೀಕಿನೊಳಗೆ ಸಲ್ಲಿಸಲು ವಿನಂತಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಕೃಷ್ಣಪ್ರಸಾದ್ ರೈಯವರನ್ನು 9480015895 ಸಂಪರ್ಕಿಸಬಹುದು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles