22.7 C
Karnataka
Thursday, May 22, 2025

ಶಾಲಾ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ನಿಗದಿ

ಮಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.
ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದ್ದು, ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುμÁ್ಠನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.
2025-26 ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು:
ಮೊದಲನೇ ಅವಧಿ ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ, ಎರಡನೇ ಅವಧಿ ಅಕ್ಟೊಬರ್ 8 ರಿಂದ 2026 ರ ಏಪ್ರಿಲ್ 10 ರವರೆಗೆ.
ರಜಾ ದಿನಗಳು: ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಹಾಗೂ ಬೇಸಿಗೆ ರಜೆ 2026ರ ಏಪ್ರಿಲ್ 11 ರಿಂದ ಮೇ 28 ರವರೆಗೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles