ಮಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ಮಂದಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ಕುಮಾರ್ ರೈ, ವೇದವ್ಯಾಸ ಕಾಮತ್, ಐವನ್ ಡಿಸೋಜಾ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.