23.5 C
Karnataka
Thursday, April 3, 2025

ಕನ್ನಡ ಉಳಿಯಬೇಕಾದರೆ ಕನ್ನಡ ಬಳಸಬೇಕು: ಡಾ. ತಾರಾನಾಥ

ಮಂಗಳೂರು: ನಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸಿದರೆ ಮಾತ್ರ ಕನ್ನಡವನ್ನು ಉಳಿಸಲು ಸಾಧ್ಯ,
ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥ
ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ
ಕಾನೂನು ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕವನ ರಚನಾ
ಕಮ್ಮಟ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ ಬಾಲಕೃಷ್ಣ ಅವರು ರಾಜ್ಯೋತ್ಸವ ಆಚರಣೆಯ ಹಿಂದೆ ಸಂಘರ್ಷದ
ಇತಿಹಾಸ ಇದೆ, ಎಂದು ರಾಜ್ಯೋತ್ಸವ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ
ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ ವಹಿಸಿಕೊಂಡಿದ್ದರು. ಲೇಖಕಿ ಅಕ್ಷತಾ ರಾಜ್ ಪೆರ್ಲ
ವಿದ್ಯಾರ್ಥಿಗಳಿಗೆ ಕವನ ರಚನಾ ಕಮ್ಮಟವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು
ಬೆಂಗಳೂರಿನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ
ಪ್ರಾಧ್ಯಾಪಕ ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಸನತ್ ಕುಮಾರ್
ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles