24.8 C
Karnataka
Thursday, April 30, 2026

ಎಸ್‌ಡಿಎಂ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಪದಗ್ರಹಣ

ಮಂಗಳೂರು : ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ 2026 -28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ
ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಹೈಕೋರ್ಟ್ ವಕೀಲ ಪಿ.ಪಿ.ಹೆಗ್ಡೆ ವಿದ್ಯಾರ್ಥಿ ವೇತನ ವಿತರಿಸಿದರು. ಸುಪ್ರೀಂ ಕೋರ್ಟ್ ವಕೀಲ ರೋಹಿತ್ ರಾವ್ ಪೂರ್ವ ವಿದ್ಯಾರ್ಥಿ ಸಂಘದ ಲಾಂಛನ ಅನಾವರಣಗೊಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಐವನ್ ಡಿಸೋಜಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ. ದೇವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಉಮೇಶ್ ಗಟ್ಟಿ
ಜತೆ ಕಾರ್ಯದರ್ಶಿ ಜಯಶ್ರೀ ಹಟ್ಟಿಹಳ್ಳಿ ಸಂಚಾಲಕ ವಿನೋದ್ ಕುಮಾರ್, ಸಂಘದ ಸಂಯೋಜಕಿ ಡಾ.ಅನ್ನಪೂರ್ಣ ಶೇಟ್ ಉಪಸ್ಥಿತರಿದ್ದರು . ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಸ್ವಾಗತಿಸಿ,ಸಂಚಾಲಕ ಅಶ್ವಿನ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles