24.8 C
Karnataka
Thursday, April 30, 2026

ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು 2025-26ನೇ ಸಾಲಿಗೆ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಕ್ರೀಡಾ ವಸತಿ ನಿಲಯದ ಆಯ್ಕೆ ಪ್ರಕ್ರಿಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳು ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ಗಂಟೆಯೊಳಗೆ ಮಂಗಳಾ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಕ್ರೀಡಾಪಟುಗಳು ದೃಢೀಕೃತ ಜನನ ಪ್ರಮಾಣ ಪತ್ರವನ್ನು ತರಬೇಕು.
ಹೆಚ್ಚಿನ ಮಾಹಿತಿಗೆ ತರಬೇತುದಾರರನ್ನು ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು (ದೂ.ಸಂ:- 7019144302, 9008848289, 0824- 2451264 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles