25.5 C
Karnataka
Saturday, November 16, 2024

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:”ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ, ಶಾಸಕ ಅಶೋಕ್ ರೈ ಅವರ ಸಾರಥ್ಯದ ರೈ ಎಸ್ಟೇಟ್ಸ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ “ಅಶೋಕ ಜನ-ಮನ” ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.


ಈ ಭಾಗದ ನಾಯಕರು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಎಂದು ಸಲಹೆ ಕೊಟ್ಟಿದ್ದಾರೆ. ಈ ಭಾಗದಲ್ಲಿ ಅತಿ ಹೆಚ್ಚು ದೇವಸ್ಥಾನಗಳಿವೆ, ಸಮುದ್ರ ತೀರವಿದೆ. ಆದ ಕಾರಣ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ ವಹಿಸಲಾಗುವುದು. ಅತಿ ದೊಡ್ಡ ಬಂದರು ಇದ್ದರೂ ಸಹ ಮಂಗಳೂರಿನಲ್ಲಿ ಉತ್ತಮವಾದ ಫೈವ್ ಸ್ಟಾರ್ ಹೋಟೆಲ್ ಗಳಿಲ್ಲ.ಪುತ್ತೂರಿನ ಅಭಿವೃದ್ಧಿಗೆ ಅಶೋಕ್ ರವರು ಅನೇಕ ಯೋಜನೆಗಳನ್ನು ಇಟ್ಟುಕೊಂಡು ಮನವಿ ಮಾಡಿದ್ದಾರೆ. ಉಪಚುನಾವಣೆ ಇರುವ ಕಾರಣ ಈಗ ಅದನ್ನು ಬಹಿರಂಗಪಡಿಸಲು ಆಗುವುದಿಲ್ಲ. ಅವರ ಮನವಿಗಳನ್ನು ಹಂತ ಹಂತವಾಗಿ ಪೂರೈಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಎರಡು ಸ್ಥಾನಗಳಷ್ಟೇ ಸಿಕ್ಕಿರಬಹುದು. ಆದರೆ ನಾವು ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತೇವೆ ಎ೦ದರು.
ವಸ್ತ್ರ ದಾನದ ಜೊತೆಗೆ ವಿದ್ಯಾದಾನದಂತಹ ಕೆಲಸವನ್ನು ಅಶೋಕ್ ರೈ ಅವರು ಮಾಡುತ್ತಿದ್ದಾರೆ. ನಮ್ಮ ಸರ್ಕಾರವು ಸಹ ಬದುಕಿನ ಮೇಲೆ ಕೆಲಸ ಮಾಡುತ್ತಿದೆ. ಭಾವನೆಗಳ ಮೇಲಲ್ಲ. 1. 20 ಕೋಟಿ ಮಹಿಳೆಯರಿಗೆ ಯಾವುದೇ ಮಧ್ಯವರ್ತಿಗಳ ಹಾಗೂ ಲಂಚದ ಹಾವಳಿ ಇಲ್ಲದೆ, ಅವರ ಖಾತೆಗೆ ನೇರವಾಗಿ ಗೃಹಲಕ್ಷ್ಮೀಯ ಹಣ ಹೋಗುತ್ತಿದೆ. ಐದು ಗ್ಯಾರಂಟಿ ಗಳು ಜನರ ಬದುಕಿನಲ್ಲಿ ಆರ್ಥಿಕ ಶಕ್ತಿಯನ್ನು ತಂದಿದೆ.

2028ರಲ್ಲಿಯೂ ಸಹ ಪುತ್ತೂರಿನ ಪಂಚಲಿಂಗೇಶ್ವರನ ಆಶೀರ್ವಾದದಿಂದ, ರಾಜ್ಯದ ಜನರ ಸೇವೆಗೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಾವು ಮಾತಿನಿಂದ ಗೆಲ್ಲುವುದಿಲ್ಲ ಹೃದಯದಿಂದ ಗೆಲ್ಲುತ್ತೇವೆ” ಎಂದರು.

ವಿಧಾನಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮ೦ಜುನಾಘ ಭ೦ಡಾರಿ, ಮಾಜಿ ಶಾಸಕ ವಿನಯ ಕುಮಾರ್‌ ಸೊರಕೆ, ಮುಖ೦ಡರಾದ ಮಮತಾ ಗಟ್ಟಿ, ಮಿಥುನ್‌ ರೈ, ಪದ್ಮರಾಜ್‌ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles