20.1 C
Karnataka
Friday, November 15, 2024

ಸೆಪ್ಟೆಂಬರ್ 15: ಬೃಹತ್ ಮಾನವ ಸರಪಳಿ

ಮಂಗಳೂರು: ಸೆಪ್ಟೆಂಬರ್ 15ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.
ಭಾನುವಾರ ಬೆಳಿಗ್ಗೆ 9.30 ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40 ರವರೆಗೆ ನಾಡಗೀತೆ, 9.41 ರಿಂದ 9:55ರ ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ, 9:55 ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57 ರಿಂದ 9:59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.
ಈಗಾಗಲೇ ಈ ಬೃಹತ್ ಮಾಣವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಈ ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ.
ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles