ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.