22.3 C
Karnataka
Monday, July 27, 2026

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಇದರ ವತಿಯಿಂದ ಜುಲೈ 28 ರಿಂದ ಆಗಸ್ಟ್ 1 ರವರೆಗೆ ನಗರದ ಮಿನಿ ವಿಧಾನಸೌಧÀ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಪ್ರದರ್ಶನದಲ್ಲಿ ಸರಕಾರಿ ನೌಕರರ ದೈನಂದಿನ ಬಳಕೆಯ ಉಡುಪುಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಆಯ್ದ ಗುಣಮಟ್ಟದ ಖಾದಿ ಸಾಮಗ್ರಿಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ.
ಈ ಪ್ರದರ್ಶನ ಸದುಪಯೋಗವನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಪಡೆದುಕೊಳ್ಳಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್. ಎಂ. ಎಸ್ ಪ್ರಕಟಣೆÉಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles