20.5 C
Karnataka
Friday, November 15, 2024

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ : ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

ಮಂಗಳೂರು: ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ. 30 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದೆ.

   ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ ಹೋಟೆಲ್, ಬೇಕರಿ, ದಿನಸಿ ಅಂಗಡಿ ಆಹಾರ ತಯಾರಕರು,ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ತೊಡಗಿಕೊಂಡಿರುವ ಎಲ್ಲಾ ಉದ್ಯಮಿಗಳು ಕಡ್ಡಾಯವಾಗಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿ ಪರವಾನಿಗೆ ಅಥವಾ ನೋಂದಣಿ ಪಡೆಯಲು ಸೂಚಿಸಲಾಗಿದೆ.

 ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಕಡ್ಡಾಯವಾಗಿ ಆಹಾರವನ್ನು ಸುರಕ್ಷಿತವಾಗಿ ಮತ್ತು ಶುಚಿತ್ವ ಕಾಪಾಡಿಕೊಂಡು ನೀಡಲು ತಿಳಿಸಲಾಗಿದೆ. ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೊಟ್ಟೆ,ಮೀನು ಮತ್ತು ಮಾಂಸದ ಆಹಾರ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ, ಸುರಕ್ಷಿತವಾಗಿ ಮತ್ತು ಶುಚಿಯಾಗಿ ಗ್ರಾಹಕರಿಗೆ ನೀಡಬೇಕು. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷಿಸಲು ಕಳುಹಿಸಿಕೊಡಲು ವಿಶೇಷ ಆಂದೋಲನವನ್ನು ಕೈಗೊಂಡಿರುತ್ತಾರೆ. ಆದ್ದರಿಂದ ಆಹಾರೋದ್ಯಮಿಗಳು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸಹಕರಿಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles