ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಯೋಜನೆ ಅಡಿಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‍ಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ 2025-26 ನೇ ಸಾಲಿನ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಹಾಗೂ 2025 ರ ಜನವರಿಯಿಂದ ಡಿಸೆಂಬರ್‍ವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಧಿಕೃತ ಕ್ರೀಡಾ ಸಂಸ್ಥೆಗಳ ಮೂಲಕ ಆಯೋಜಿಸಿರುವ ಅಧಿಕೃತ ಕ್ರೀಡಾಕೂಟಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ವಿಜೇತ / ಭಾಗವಹಿಸಿದ (ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಮಾಸ್ಟರ್ಸ್ ಕ್ರೀಡಾಕೂಟಗಳನ್ನು ಹೊರತುಪಡಿಸಿ) ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿರುವ 29 ವರ್ಷ ವಯೋಮಾನದೊಳಗಿನ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನ. ಅರ್ಹ ಆಸಕ್ತ ಕ್ರೀಡಾಪಟುಗಳು ನಿಗಧಿತ ಅರ್ಜಿಯನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2451264 ಸಂಪರ್ಕಿಸಬಹುದು ಎಂದು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


