ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಐತಿಹಾಸಿಕ ರಾಜ್ಯ ಮಟ್ಟದ
ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ವ್ಯಾಪಕ ಸಿದ್ದತೆ ಮಾಡಲಾಗಿದೆ. ಮಧ್ಯಾಹ್ನ ೨ ಗ೦ಟೆಗೆ ಸಮಾವೇಶ ಆರ೦ಭಗೊಳ್ಳಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿ ಬೂತ್ ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಸೇರಿದ೦ತೆ ಪಕ್ಷದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ಧರಾಮಯ್ಯ ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಪದಾಧಿಕಾರಿಗಳು, ನಾಯಕರು ಭಾಗವಹಿಸಲಿದ್ದಾರೆ.