17.5 C
Karnataka
Friday, November 22, 2024

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಇರಲಿಲ್ಲ :ಸಿಎಂ ಸಿದ್ದರಾಮಯ್ಯ

ಮಂಗಳೂರು : ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದೇ ಕಾಯ೯ಕ್ರಮಗಳನ್ನು ನೀಡಿದ್ದರಾ ಎಂದು ಮುಖ್ಯು೦ತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚು ಇದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ.ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮ ಕೇ೦ದ್ರ ಸರಕಾರದಿ೦ದ ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಎಂದರು.‌


013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು. ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದರು. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ ಎಂದು ಹೇಳಲು ಆರಂಭಿಸಿದ್ದಾರೆ ಎ೦ದವರು ಹೇಳಿದರು.


ಸಮಾವೇಶ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಕೇ೦ದ್ರದ ಬಿಜೆಪಿ ಸರಕಾರ ಸ೦ವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡಿ ಸವಾ೯ಧಿಕಾರದ ಆಡಳಿತ ನಡೆಸುತ್ತಿದೆ. ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕಾಯ೯ ಮಾಡುತ್ತಿದೆ.ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಆತ೦ಕ ಎದುರಾಗಿದೆ. ಮು೦ದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿ೦ದಕಿತ್ತೆಸೆಯಬೇಕಾಗಿದೆ. ಕಾ೦ಗ್ರೆಸ್‌ ಪಕ್ಷದ ಕಾಯ೯ಕತ೯ರು ಒಗ್ಗಟ್ಟಿನಿ೦ದ ಪಕ್ಷದ ಗೆಲುವಿಗೆ ಶ್ರಮಿಸಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ೦ತೆ ಮಾಡಬೇಕು ಎ೦ದು ಕರೆ ನೀಡಿದರು.
ಪ್ರಸ್ತಾವನೆಗೈದ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎ೦ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎ೦ದರು.


ನಾನು ಚುನಾವಣೆ ಸಮಯದಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನಿಮಗೆ ಶಕ್ತಿ ನೀಡಿದ್ದೇವೆ ಎ೦ದವರು ಹೇಳಿದರು.
ದ.ಕ.ಜಿಲ್ಲಾ ಕಾ೦ಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಸ್ವಾಗತಿಸಿದರು.ವಿಧಾನ ಪರಿಷತ್‌ ಸದಸ್ಯ ಮ೦ಜುನಾಥ ಭ೦ಡಾರಿ ನಿರೂಪಿಸಿದರು. AICC ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರುಗಳಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ.ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಾಳ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿದ್ದರು.

.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles