ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ – ಖಾಸಗಿ – ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ ಎ೦ದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ .ಎಂ.ಎನ್. ರಾಜೇಂದ್ರ ಕುಮಾರ್ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ವಿವರಿಸಿದ ಡಾ .ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎ೦ದರು.
ಮಂಗಳೂರಿನಲ್ಲಿ ನವೆಂಬರ್ 18ರಂದು ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನುಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್ ಇವರು ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ಅವರು ನೆರವೇರಿಸಲಿರುವರು.‘‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ’’ವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಲಿದ್ದಾರೆ.
‘‘ಉತ್ತಮ ಸ್ವ-ಸಹಾಯ ಸಂಘ’’ಗಳಿಗೆ ಪುರಸ್ಕಾರವನ್ನುಸಂಸದರಾದ ನಳಿನ್‌ಕುಮಾರ್ ಕಟೀಲ್ ಅವರು ಮಾಡಲಿರುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಮಾನ್ಯ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ನೆರವೇರಿಸಲಿರುವರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ‘‘ಸಹಕಾರ ಜಾಥಾ’’ ಉದ್ಘಾಟನೆಯನ್ನು ಶಾಸಕರಾದ ವೇದವ್ಯಾಸ್ ಡಿ. ಕಾಮತ್ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ .ಭರತ್ ಶೆಟ್ಟಿ ವೈ., ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷಯಶ್‌ಪಾಲ್ ಎ. ಸುವರ್ಣ ಭಾಗವಹಿಸಲಿರುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಉಪಸ್ಥಿತರಿರುವರು.ವಿಶೇಷ ಆಹ್ವಾನಿತರಾಗಿ ಮಂಜುನಾಥ ಪ್ರಸಾದ್, ಸರಕಾರದಪ್ರಧಾನ ಕಾರ್ಯದರ್ಶಿಗಳು, ಸಹಕಾರ ಇಲಾಖೆ, ಕ್ಯಾಪ್ಟನ್ ಡಾ॥ ಕೆ. ರಾಜೇಂದ್ರ,ಸಹಕಾರ ಸಂಘಗಳ ನಿಬಂಧಕರು, ಮುಲ್ಲೈ ಮುಹಿಲನ್ ಎಂ. ಪಿ., ಜಿಲ್ಲಾಧಿಕಾರಿಗಳು, ಅನುಪಮ್ ಅಗರ್‌ವಾಲ್, ಪೊಲೀಸ್ಆಯುಕ್ತರು, ಮಂಗಳೂರು ಭಾಗವಹಿಸಲಿರುವರು.
ಈ ಸಂದರ್ಭದಲ್ಲಿ ‘‘ಸಹಕಾರ ಜಾಥಾ’’ ಆಯೋಜನೆ ಮಾಡಲಾಗಿದ್ದು, ಪೂರ್ವಾಹ್ನ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳವಿವಿಧ ಟ್ಯಾಬ್ಲೋಗಳೊಂದಿಗೆ ನಡೆಯಲಿದೆ.ಮುಖ್ಯವಾಗಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನವಾದ ನ.18ರಂದು ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಇಲ್ಲಿ ನಡೆಯುವ ಈರಾಜ್ಯ ಮಟ್ಟದ ವಿಶಿಷ್ಟ ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಗಳು, ಸಹಕಾರಿಗಳು, ಸ್ವ-ಸಹಾಯಸಂಘದ ಸದಸ್ಯರು ಭಾಗವಹಿಸಿ, ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಿ, ಸಹಕಾರ ಚಳುವಳಿಯನ್ನುಅರ್ಥಪೂರ್ಣವಾಗಿಸಲು ಎಲ್ಲರೂ ಸಹಕರಿಸ ಎ೦ದು ಡಾ ಎಂ.ಎನ್. ರಾಜೇಂದ್ರ ಕುಮಾರ್‌ರವರು ವಿನ೦ತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿದೇ೯ಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ, ಶಶಿ ಕುಮಾರ್ ರೈ, ಸದಾಶಿವ ಉಳ್ಳಾಲ್, ರಾಜು ಪೂಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿಯೂನಿಯನ್ ಅಧ್ಯಕ್ಷರುಗಳಾದ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಯಕರ ಶೆಟ್ಟಿ ಇ೦ದ್ರಾಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀ೦ದ್ರ ಕ೦ಬಳಿ ಮೈಸೂರು ಪ್ರಾ೦ತ ಸಹಕಾರ ಸ೦ಘಗಳ ಜ೦ಟಿ ನಿಬ೦ಧಕ ಡಾ. ಉಮೇಶ್ ಉಪಸ್ಥಿತರಿದ್ದರು.