ಬಂಟ್ವಾಳ: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ೦ಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸ೦ಭವಿಸಿದೆ
ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಎ೦ಬಾತನನ್ನು ಪ್ರೇಮಿಸಿ ಮೂರು ತಿಂಗಳ ವಿವಾಹ ವಾಗಿದ್ದರು.
ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ. ಪ್ರೀತಿಸಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗುತ್ತಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿ ಮಾನಸಿಕ ಕಿರುಕುಳ ಕೊಡುತ್ತಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಆಜ್ಮಾನ್ ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದಲ್ಲದೆ ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಅತ್ತೆ ಮತ್ತು ನಾದಿನಿಯವರು ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು ಎಂದು ಮನೆಯವರಲ್ಲಿ ತಿಳಿಸಿದ್ದಳು.
ಗ೦ಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದು ಮರುದಿನ ಮನೆಯವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎ೦ದು
ಸಹೋದರ ನಾಸೀರ್ ಅವರು ಬ೦ಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.