ಮಂಗಳೂರು: ನೀರುಮಾರ್ಗ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯ ಸಂಗ್ರಹಿಸಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಬೃಹತ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸ್ವಚ್ಚತಾ ಕಾರ್ಯದ ವೇಳೆ ರಸ್ತೆ ಬದಿ ಎಸೆದ ಕಸದ ಮೂಟೆಯಲ್ಲಿ ಕೆಲವೊಂದು ಬಿಲ್‍ಗಳು ಹಾಗೂ ಆನ್‍ಲೈನ್ ನಿಂದ ಖರೀದಿಸಿದ ವಸ್ತುಗಳ ಕವರ್‍ಗಳು ಸಿಕ್ಕಿದ್ದು, ಅದರಲ್ಲಿನ ವಿಳಾಸವನ್ನು ಪತ್ತೆ ಹಚ್ಚಿ ಸಂಬಂಧಪಟ್ಟವರಿಂದ ಸುಮಾರು ರೂ. 5000 ದಂಡ ವಸೂಲಿ ಮಾಡಲಾಯಿತು.
ಈ ಸ್ವಚ್ಚತಾ ಕಾರ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸಿ ಅಪ್ಪಣ್ಣ, ಸಹಾಯಕ ನಿರ್ದೇಶಕ ಮಹೇಶ್ ಅಂಬೇಕಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು, ಗ್ರಾಮಪಂಚಾಯಿತಿ ಸದಸ್ಯರುಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.