26.3 C
Karnataka
Saturday, November 23, 2024

ತೆರಿಗೆ ಪಾವತಿ ಪ್ರತಿ ನಾಗರಿಕನ ಕರ್ತವ್ಯ: ಶರೀಫ್‌

ಮಂಗಳೂರು: ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ತೆರಿಗೆ ಪಾವತಿ ಎಂಬುದು ನಮ್ಮಲ್ಲೆರ ಸಾಮೂಹಿಕ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ದಂಡ ತೆರಬೇಕಾಗುತ್ತದೆ ಎಂದು ಆದಾಯ ತೆರಿಗೆ ಅಧಿಕಾರಿ ಅಬ್ದುಲ್ ಶರೀಫ್ ಕೆ ಎಂ. ಜಾಗೃತಿ
ಮೂಡಿಸಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಆದಾಯ ತೆರಿಗೆ ಇಲಾಖೆವತಿಯಿಂದ ಜಾಗೃತಿ ಅಭಿಯಾನ ನಡೆಸಲಾಯಿತು. ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ತೆರಿಗೆ ಇಲಾಖೆ ವತಿಯಿಂದ ಮೂಲದಲ್ಲಿ ಕಡಿತಗೊಳಿಸಿದ ತೆರಿಗೆ (ಟಿಡಿಎಸ್) ಮತ್ತು ಮೂಲದಲ್ಲಿ ಸಂಗ್ರಹಿಸಲಾದ ತೆರಿಗೆ (ಟಿಸಿಎಸ್) ಸಂಬಂಧಿಸಿದ ನಿಬಂಧನೆ ಕುರಿತಂತೆ ಕೇಂದ್ರೀಕೃತ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.
ಟಿಡಿಎಸ್ ಮತ್ತು ಟಿಸಿಎಸ್ ಅಡಿ ಬರುವ ವಿವಿಧ ಅಂಶಗಳ ಬಗ್ಗೆ ವಿವರಣೆ ನೀಡಿದರು. ಇದೇ ವೇಳೆ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹಾಗೂ ತೆರಿಗೆ ಇಲಾಖೆ ಅಧಿಕಾರಿಗಳಾದ ಭಾಸ್ಕರ್ ಮತ್ತು ಪರ್ವೀನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಹಲಾ ನಿರೂಪಿಸಿ, ಕಚೇರಿ ಅಧೀಕ್ಷಕಿ ಭಾಗ್ಯಲಕ್ಷ್ಮಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles