ಮ೦ಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಸಿ.ಆರ್. ಚಂದ್ರನ್ ( 78 ವರ್ಷ) ಬ೦ಧಿತ ಆರೋಪಿ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ LPC ವಾರಂಟ್ ಆಸಾಮಿ ಯಾಗಿರುವ ಕೇರಳ ಮಲಪುರಂ ಜಿಲ್ಲೆಯ ಚಂದ್ರನ್ ( 78 ವರ್ಷ) ಎಂಬಾತನು ಕಳೆದ 55ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೇರಳ ರಾಜ್ಯದ ಕ್ಯಾಲಿಕಟ್ ನ ಪುಲ್ಲಿಕಲ್ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ ಇದು ಅತ್ಯಂತ ಹಳೆಯ ಪ್ರಕರಣವಾಗಿದೆ


