17.5 C
Karnataka
Friday, November 22, 2024

ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಯಕ್ಷಗಾನ ತಂಡ

ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು.
ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ.
ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಪಟ್ಲ ಸತೀಶ್ ಶೆಟ್ಟಿ ಅವರು, “ವಿದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ” ಎಂದರು.
“ಅಮೇರಿಕಾದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೇರಿಕಾ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು ಅವರಿಗೆ ಧನ್ಯವಾದಗಳು” ಎಂದರು.
ಪ್ರೊ.ಎಂ.ಎಲ್. ಸಾಮಗ ಮಾತನಾಡಿ, “ಅಮೇರಿಕಾದ ಜನರು ನಮ್ಮ ಯಕ್ಷಗಾನ ತಂಡದ ಮೇಲೆ ತೋರಿಸಿದ ಪ್ರೀತಿ ಮರೆಯಲಾಗದ್ದು ಎಂದು ವಿವರಿಸಿದರು.
ಪಟ್ಲ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles