23.7 C
Karnataka
Tuesday, January 7, 2025

ನಗರದಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ : ಸ್ಪೀಕರ್

ಮಂಗಳೂರು: ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣವು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.
ಅವರು ಶುಕ್ರವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.
ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು. ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಕ್ರೀಡಾಂಗಣವನ್ನು ಬಳಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಆದಷ್ಟು ಬೇಗನೆ ಕ್ರೀಡಾಂಗಣವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ, ಸ್ಮಾರ್ಟ್ ಸಿಟಿ ಎಂ ಡಿ ರಾಜು, ಕ್ರೀಡಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles