18.5 C
Karnataka
Friday, November 22, 2024

ಗಿರಿಶಿಖರಗಳ ಚಾರಣ ನಿಷೇಧ: ಆದೇಶ ವಾಪಾಸ್

ಮಂಗಳೂರು: ಗಿರಿಶಿಖರಗಳ ಚಾರಣ ನಿಷೇಧ ಆದೇಶವನ್ನು ಹಿಂಪಡೆಯಲಾಗಿದೆ .
2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ, ಮರ ಬೀಳುವಂತಹ ದುರ್ಘಟನೆಗಳು ನಡೆಯುವ ಸಂಬಂಧವಿದ್ದ ಕಾರಣ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಜಿಲ್ಲೆಯಲ್ಲಿ ಗಿರಿತಾಣ/ಶಿಖರಗಳ ಚಾರಣವನ್ನು (ಟ್ರೆಕ್ಕಿಂಗ್) ಮತ್ತು ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್, ಸಾಹಸ ಚಟುವಟಿಕೆ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು. ಈ ಆದೇಶವನ್ನು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಬಂಧನೆಗೊಳಪಟ್ಟು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles