ಮ೦ಗಳೂರು:ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ಭೂಕುಸಿತ/ಗುಡ್ಡ ಕುಸಿತ ಉಂಟಾಗುವ ಸಂಭವದ ಹಿನ್ನಲೆಯಲ್ಲಿ ವಾಹನಗಳ ಸಂಚಾರನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ – 275ರಲ್ಲಿ, ಸಂಪಾಜೆಯಿಂದ ಮಡಿಕೇರಿ ವರೆಗಿನ ಕೆಲಪ್ರದೇಶಗಳಲ್ಲಿ ಭೂಕುಸಿತ/ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸದ್ರಿ ಮಾರ್ಗವಾಗಿ ಸಾಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು (ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ / ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ) ದಿನಾಂಕ 18.07.2024 ರಿಂದ 22.07.2024ರ ವರೆಗೆ, ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಖಾಂತರ, ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು, ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿ ತಿಳಿಸಲಾಗಿದೆ.