24.5 C
Karnataka
Thursday, April 30, 2026

ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಇಬ್ಬರ ಸೆರೆ

ಮ೦ಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ.


ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ,ಅಡ್ಯಾರ್, ಕಣ್ಣೂರು ನಿವಾಸಿ , ಅಬ್ದುಲ್ ಸಲಾಮ್ (39 ) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000/- ಮೌಲ್ಯದ ನಿಷೇದಿತ ಎಂಡಿಎಂಎ, ಆಟೋ ರಿಕ್ಷಾ,

ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು,ಬೋಳಿಯಾರು ನಿವಾಸಿ , ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ,(28) ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000/- ಮೌಲ್ಯದ ಎಂಡಿಎಂಎ, ಯಮಹಾ FZ ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles