16.7 C
Karnataka
Saturday, November 23, 2024

ಟಾಗೋರರ ಜನ್ಮದಿನ: ಪುಸ್ತಕ ಪ್ರದರ್ಶನ ಮತ್ತು ವಿಮರ್ಶೆ

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ ಆಂಗ್ಲ ಸಂಘ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟಾಗೋರ್‌ ಅವರ ಜನ್ಮದಿನದ ಅಂಗವಾಗಿ
ಗ್ರಂಥಾವಲೋಕನ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ರವೀಂದ್ರನಾಥ ಟಾಗೋರ್ ಅವರ ಪುಸ್ತಕಗಳನ್ನು ಪ್ರದರ್ಶನ ಮಾಡಲಾಯಿತು. ಟಾಗೋರ್ ಅವರ ವ್ಯಕ್ತಿತ್ವ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಕೃತಿ ಗೀತಾಂಜಲಿ ಕುರಿತು ದ್ವಿತೀಯ ಬಿಎ ವಿದ್ಯಾರ್ಥಿ ಮಹಮ್ಮದ್ ಮುಷಬ್ ಹಾಗೂ ಪ್ರಥಮ ಬಿಎ ವಿದ್ಯಾರ್ಥಿನಿ ವೈಷ್ಣವಿ ರಾಜೇಶ್ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ ಅಧ್ಯಕ್ಷತೆವಹಿಸಿ, ರವೀಂದ್ರನಾಥ ಟಾಗೋರ್ ಅವರಚಿಂತನೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ವಿದ್ಯಾರ್ಥಿನಿ ಜಯಲಕ್ಷ್ಮಿ ಸ್ವಾಗತಿಸಿ, ಪ್ರಿಯಾ ನಿರೂಪಿಸಿದರು. ಕಾಲೇಜಿನ ಗ್ರಂಥಾಪಾಲಕಿ ಡಾ.ವನಜಾ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶೋಭಾ, ಆಂಗ್ಲ ವಿಭಾಗದ ಉಪನ್ಯಾಸಕರುಗಳಾದ ರೇಖಾ ಶೆಟ್ಟಿ, ಪುಷ್ಪಲತಾ, ಅರ್ಜುನ್, ಶಿಫಾನಿ, ಶ್ರೀಪ್ರಜ್ಞಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles