ಮ೦ಗಳೂರು: ಪುರುಷ ಪ್ರಧಾನ ಸಮಾಜವಾಗಿದ್ದ 18ನೇ ಶತಮಾನದಲ್ಲಿ ವೈರಿ ಪಡೆಯನ್ನು ದಿಟ್ಟವಾಗಿ ಎದುರಿಸಿದ ಒನಕೆ ಓಬವ್ವ ಅವರ ಸಾಹಸ ಸ್ಮರಣೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾರ್ ಸ್ಟ್ರೀಟ್ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒನಕೆಯನ್ನೇ ಅಸ್ತ್ರವಾಗಿಟ್ಟು ಹೋರಾಡಿದ ಓಬವ್ವ ಮಹಿಳಾ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ಶಾಸಕರು ಹೇಳಿದರು.
ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.ಕಾಲೇಜಿನ ಪ್ರಾಂಶುಪಾಲೆ ಭಾರತೀ ಭಾಯಿ ಉಪಸ್ಥಿತರಿದ್ದರು. ವಾರುಣಿ ನಿರೂಪಿಸಿದರು