17.2 C
Karnataka
Wednesday, January 22, 2025

“ವೀರಕೇಸರಿ ಟ್ರೊಫಿ-2025” ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಿತು.
ಕಾರ್ಯಕ್ರಮವನ್ನು ಉದ್ಯಮಿ ಮಧ್ಯಗುತ್ತು ಕರುಣಾಕರ ಶೆಟ್ಟಿ ಮಧ್ಯಗುತ್ತು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ “ನನಗೆ ಕ್ರೀಡೆಯಲ್ಲಿ ಬಾಲ್ಯದಿಂದಲೂ ಹೆಚ್ಚಿನ ಆಸಕ್ತಿ. ಹೀಗಾಗಿ ಕ್ರೀಡಾ ಚಟುವಟಿಕೆಗಳಿಗೆ ನನ್ನಿಂದಾದ ಸಹಕಾರ ನೀಡುತ್ತಾ ಬಂದಿದ್ದೇನೆ. ಬರೀ ಕ್ರೀಡೆ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ವೀರಕೇಸರಿ ಸಂಘಟನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಪರ ಕಾಳಜಿಯೊಂದಿಗೆ ಕೆಲಸ ಮಾಡಲಿ“ ಎಂದರು.
ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ,ಬಿಎಎಸ್ ಎಫ್ ನ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ವೈದ್ಯ ಶಶಿರಾಜ್ ಶೆಟ್ಟಿ, ಅಂಜನಾ ಎಂ. ಶೆಟ್ಟಿ, ಯಜ್ನೇಶ್ವರ್ ಬರ್ಕೆ, ಉದ್ಯಮಿ ಸತೀಶ್ ಮುಂಚೂರು, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಮುಂಚೂರು, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲ್, ಜನನಿ ಕನ್ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜಾ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಸಂಘಟನೆಯ ಗೌರವಾಧ್ಯಕ್ಷ ಸಂಚಾಲಕ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಸುಕುಮಾರ್ ತಡಂಬೈಲ್, ಕಾರ್ಯದರ್ಶಿ ರೂಪೇಶ್ ರೈ ಕೈಲಾಸ್ ತಡಂಬೈಲ್, ಪದ್ಮನಾಭ ಕರ್ಕೇರ, ರಾಘವೇಂದ್ರ ಶೆಟ್ಟಿ ತಡಂಬೈಲ್ ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉದ್ಯಮಿ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತುಮ
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಾಸಕ ಡಾ ವೈ ಭರತ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ , ಪಾಂಡುರಂಗ ಕೆ ಪ್ರಭು ಕೊಡಿಪಾಡಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಭಾಗವಹಿಸಿದ್ದರು.
ಅನುಪ್ ಶೆಟ್ಟಿ ಸ್ತುತಿಸಿದರು. ಅಶೋಕ್ ಶೆಟ್ಟಿ ತಡಂಬೈಲ್ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್, ಬಿಂದಿಯ ಶೆಟ್ಟಿ, ಅನೂಪ್ ಶೆಟ್ಟಿ, ರಾಮಚಂದ್ರ ಶೆಟ್ಟಿ ತಡಂಬೈಲ್ ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದು ಪ್ರಥಮ‌ ಬಹುಮಾನವನ್ನು ಪಂಜ ಫ್ರೆಂಡ್ಸ್, ರನ್ನರ್ಸ್ ಅಪ್ ಪ್ರಶಸ್ತಿಯನ್ನು ಸುರತ್ಕಲ್ ಸ್ಟೈಕರ್ಸ್ ತೃತೀಯ ಪ್ರಶಸ್ತಿಯನ್ನು ಐಎಎಮ್ ಟೈಗರ್ ತಂಡ ಚತುರ್ಥ ಪ್ರಶಸ್ತಿಯನ್ನು ಎಂಎಫ್ ಸಿ ಮುಂಚೂರು ತಂಡ ಪಡೆದುಕೊಂಡಿತು.
ಮಹಿಳಾ ವಿಭಾಗದಲ್ಲಿ ಉಜಿರೆ ಪ್ರಥಮ ಉಡುಪಿ ದ್ವಿತೀಯ ಪ್ರಶಸ್ತಿ ಪಡೆಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles