23.1 C
Karnataka
Thursday, July 16, 2026

ಮಂಗಳೂರಿಗೆ ಉಪರಾಷ್ಟ್ರಪತಿ ಆಗಮನ

ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.
ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು ಉಪಸ್ಥಿತರಿದ್ದು, ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು.
ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವರು. ಭಾನುವಾರ ಬೆಳಿಗ್ಗೆ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಬಳಿಕ ಅಮೃತವರ್ಷಿನಿ ಸಭಾಂಗಣದಲ್ಲಿ ಸಿರಿ ಕೈಗಾರಿಕಾ ಪಾರ್ಕ್ ಉದ್ಘಾಟನೆ ನೆರವೇರಿಸಲಿದ್ದದಾರೆ. ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles