ಮ೦ಗಳೂರು: ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿ “ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ ಕಾರ್ಯಕ್ರಮ ಸೆಪ್ಟೆಂಬರ್ ರ೦ದು ನಡೆಯಿತು.
ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಅತಿಥಿಯಾಗಿ ಮಂಜುನಾಥ್ ಆಗಮಿಸಿದ್ದವರು . ಎಸ್. ದೇಶದ ಪ್ರತಿಷ್ಠಿತ ಹಾಗೂ ದೇಶದ ನಂಬರ್ 1 ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆ ಏಮ್ಸ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮಂಜುನಾಥ್ 2020 ರ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ 34ನೇ ರ್ಯಾಂಕ್ ಪಡೆದ ಪ್ರತಿಭಾವಂತ.
ವಿದ್ಯಾರ್ಥಿಗಳ ಪ್ರಶ್ನೆ ಹಾಗೂ ಸಂದೇಹಗಳಿಗೆ ಅನುಭವದ ಆಧಾರದ ಮೇಲೆ ಉತ್ತರಿಸಿದ ಮಂಜುನಾಥ್ ಪ್ರತಿದಿನದ ತಯಾರಿಯು ಎಂಥಹಾ ಪರಿಣಾಮ ಬೀರಬಹುದು ಎಂಬುದನ್ನು ವಿವರಿಸಿದರು. “ಪ್ರಯತ್ನಶೀಲತೆ ಹಾಗೂ ಪರಿಣಾಮಕಾರಿ” ಅಭ್ಯಾಸ ನಿರಂತರವಾಗಿರಬೇಕು. ವೈಜ್ಞಾನಿಕ ಸ್ಟಡಿ ಮಾದರಿ, ಫಲೋಅಪ್, ಆಪ್ತಸಮಾಲೋಚನೆ, ಹೆಚ್ಚಿನ ಸಮಯದ ಅಭ್ಯಾಸ ತರಗತಿಗಳು ಹಾಗೂ ವಿಷಯ ತಜ್ಞರ ತರಬೇತಿ ಮಾದರಿಯನ್ನು ಈಗಾಗಲೇ ವಿದ್ವತ್ ಪಿಯು ಕಾಲೇಜಿನಲ್ಲಿ ಅಳವಡಿಸಿಕೊಂಡಿರುವುದರಿಂದ ಅದರ ಧನಾತ್ಮಕ ಪರಿಣಾಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ಹಾಗೂ ಕಾಲೇಜಿನಲ್ಲಿರುವ ಕೌನ್ಸಲಿಂಗ್ ವ್ಯವಸ್ಥೆಯನ್ನು ಕೊಂಡಾಡಿದರು.
ಸಂಸ್ಥೆಯ ಅಧ್ಯಕ್ಷ ಸುಭಾಶ್ಷಂದ್ರ ಶೆಟ್ಟಿಯವರು ವಿದ್ವತ್ ಪಿಯು ಕಾಲೇಜಿನ ಸಾಧಕರ ಮಾದರಿ ವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಿ ವಿದ್ವತ್ ಫೌಂಡೇಶನ್ ನಿಂದ ಡೆಸ್ಟಿನೇಶನ್ ವರೆಗೆ ಹೇಗೆ ಮಾರ್ಗದರ್ಶನ ಮಾಡುವ ವ್ಯವಸ್ಥೆಯಾಗಿದೆ ಎಂಬುದನ್ನು ವಿವರಿಸಿದರು.
ಸಂಸ್ಥೆಯ ಕೋಶಾಧಿಕಾರಿ ಎಂ.ಕೆ ಕಾಶಿನಾಥ್ ಹಾಗೂ ಪ್ರಾಂಶುಪಾಲಅರುಣ್ ಕ್ಯಾಸ್ತಲಿನೊ ಉಪಸ್ಥಿತರಿದ್ದರು. ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು