ಮ೦ಗಳೂರು: ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್.ಡಿ.ಎಮ್ ತಂಡವು ಪ್ರಥಮ ಸ್ಥಾನವನ್ನು ಹಾಗೂ ಮಂಗಳ ಸ್ಪೋರ್ಟ್ಸ್ ಕ್ಲಬ್ ಉರ್ವಾಸ್ಟೋರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಪುರುಷರ ವಿಭಾಗದಲ್ಲಿ ತಾಲೂಕಿನ 22 ತಂಡಗಳು ಭಾಗವಹಿಸಿ, ಫ್ರೆಂಡ್ಸ್ ಉಜಿರೆ.ಎ ತಂಡ ಪ್ರಥಮ ಸ್ಥಾನ ಗಿಟ್ಟಿಸಿಕೊಂಡರೆ, ದ್ವಿತೀಯಆರ್ ಜೆ ಫ್ರೆಂಡ್ಸ್ , ತೃತೀಯ ಭಜರಂಗಿ ಬಾಯ್ಸ್ ಬಿ ತಂಡ ಹಾಗೂ ಫ್ರೆಂಡ್ಸ್ ಉಜಿರೆ ಬಿ ತಂಡ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.
ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ,ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕರಾದ ರಾಜಶೇಖರ್ ಶೆಟ್ಟಿಯವರು ಆಗಮಿಸಿದ್ದರು. ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಧನ್ಯವಾದ ಸಮರ್ಪಿಸಿದರು.