ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಇದರ ವತಿಯಿ೦ದ ಜ.19ರಂದು ಕೆನರಾ ಹೈಸ್ಕೂಲ್ ಮೈದಾನದಲ್ಲಿ ವಿಶಿಷ್ಟರಿಗಾಗಿ ವಿಶಿಷ್ಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ“ ಎಂದು ಸಂಘಟನೆಯ ಗೌರವಾಧ್ಯಕ್ಷ ಡಾ. ವಿ.ಮುರಳೀಧರ ನ್ಯಾಕ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೇಳವು ಕೆನರಾ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್‌ನ ಸಹಭಾಗಿತ್ವದಲ್ಲಿ ಜ.19ರ ಆದಿತ್ಯವಾರದಂದು ಬೆಳಿಗ್ಗೆ 8.30ರಿಂದ ಸಾಯಂಕಾಲ 4.15ರ ತನಕ ಮಂಗಳೂರಿನ ಡೊಂಗರಿಕೇರಿಯ ಕೆನರಾ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವುದು. ಅಂದು ಬೆಳಿಗ್ಗೆ 9.30 ಗಂಟೆಗೆ ಮೇಳದ ಉದ್ಘಾಟನೆಯನ್ನು ಮೇಯರ್ ಮನೋಜ್ ಕುಮಾರ್ ನೆರವೇರಿಸಲಿದ್ದಾರೆ. ಸಿಟಾಡೆಲ್ ಪ್ರೊಜೆಕ್ಟ್ ಮತ್ತು ಡೆವೆಲಪರ್ರ್ಸ್ ನ ರಾಮ್ ಕುಮಾರ್ ಮತ್ತು ಅಸ್ತ್ರ ಗ್ರೂಪ್ ಸಿ.ಇ.ಒ. ಲಾಂಚೂಲಾಲ್ ಕೆ.ಎಸ್. ಇವರು ಮುಖ್ಯ ಅತಿಥಿಗಳಾಗಿರುತ್ತಾರೆ ಎ೦ದರು.
ಮೇಳದಲ್ಲಿ ದಿವ್ಯಾಂಗರು ಖುಷಿ ಪಡುವುದರ ಜೊತೆಗೆ ಹಾಡುವುದು, ಕುಣಿಯುವುದು, ಸ್ಪರ್ಧೆ ಹಾಗೂ ಆಟೋಟಗಳಲ್ಲಿ ಭಾಗವಹಿಸುವುದು, ಕುದುರೆ ಸವಾರಿ ಸಹಿತ ಅನೇಕ ಮೋಜಿನ ಆಟಗಳ ವ್ಯವಸ್ಥೆ ಇರುತ್ತದೆ. ಹೆತ್ತವರನ್ನೂ ಸೇರಿಸಿದಂತೆ ಮನರಂಜನಾ ಸ್ಪರ್ಧೆಗಳು ಇರುತ್ತವೆ. ಮೇಳದಲ್ಲಿ ವಿಶಿಷ್ಟರಿಗೆ ಎಲ್ಲವೂ ಮುಕ್ತ ಮತ್ತು ಉಚಿತ. ಆಶಾಜ್ಯೋತಿಯಚಟುವಟಿಕೆಗಳು ಸಾರ್ವಜನಿಕರು ಹಾಗೂ ಸರ್ಕಾರಿ ಸಂಸ್ಥೆಗಳ ಆರ್ಥಿಕ ಸಹಕಾರದಿಂದಲೇ ನಡೆಯುತ್ತವೆ“ ಎಂದವರು ವಿವರಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷೆ ಗೀತಾ ಲಕ್ಷ್ಮೀಶ್, ಕಾರ್ಯದರ್ಶಿ ಎಸ್. ರವಿನಾಥ ಕುಡ್ವ, ಜೊತೆ ಕಾರ್ಯದರ್ಶಿ ಗಣರಾಜ ವೈ, ಖಜಾಂಚಿ ಕೆ.ವಿಶ್ವನಾಥ ಪೈ, ಜೊತೆ ಖಜಾಂಚಿ ಬಿ.ಅಶ್ವತ್ಥಾಮ ರಾವ್ ಮತ್ತು ಸೇವಾಭಾರತಿ ಗೌರವ ಕಾರ್ಯದರ್ಶಿಯಾದ ಹೆಚ್.ನಾಗರಾಜ ಭಟ್, ಖಜಾಂಚಿ ಪಿ.ವಿನೋದ್ ಶೆಣೈ ಉಪಸ್ಥಿತರಿದ್ದರು.