ಮಂಗಳೂರು:203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ.
ಮತದಾರರ ಪಟ್ಟಿಯಲ್ಲಿ 2024 ಜನವರಿ 01ರಂದು 18 ವರ್ಷ ತುಂಬುವ ಮತ್ತು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಳಿಸುವ, ತಿದ್ದುಪಡಿ, ಮೃತಪಟ್ಟ ಹಾಗೂ ವಾಸ್ತವ್ಯ ಬದಲಾವಣೆ ಮಾಡಲಾದ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಕುರಿತು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 9ರೊಳಗೆ VOTER HELPLINE ಆ್ಯಪ್ ಅಥವಾ www.voters.eci.govt.in ವೆಬ್‍ಸೈಟ್ ಅಥವಾ ತಮ್ಮ ಭಾಗ ಸಂಖ್ಯೆಯ ಬೂತ್ ಮಟ್ಟದ ಅಧಿಕಾರಿಯನ್ನು ಸಂಪರ್ಕಿಸಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 8861696373 ಸಂಪರ್ಕಿಸುವಂತೆ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.