ಮಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ.
ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.