17.5 C
Karnataka
Friday, November 22, 2024

ವೀಕ್ಷಕರಿಂದ ಮತದಾರರ ಪಟ್ಟಿ ಪರಿಶೀಲನೆ: ದ.ಕ. ಜಿಲ್ಲೆಯಲ್ಲಿ17.85 ಲಕ್ಷ ಮತದಾರರು

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ. ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು.
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವೀಕ್ಷಕರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈಗಿನ ಕರಡು ಮತದಾರರ ಪಟ್ಟಿಯಲ್ಲಿ 1785835 ಮತದಾರರು ಇದ್ದಾರೆ. ಈ ಪೈಕಿ 873389 ಗಂಡಸರು, 912369 ಮಹಿಳೆಯರು ಹಾಗೂ 77 ತೃತೀಯ ಲಿಂಗ ಇದ್ದಾರೆ ಎಂದರು.
ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024 ರಲ್ಲಿ ಜಿಲ್ಲೆಯಲ್ಲಿ 27740 ಹೆಸರು ಸೇರ್ಪಡೆ, 15961 ತಿದ್ದುಪಡಿ, 24870 ಹೆಸರು ತೆಗೆದು ಹಾಕಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ 22511 ಯುವ ಮತದಾರರು(18-19 ವರ್ಷ) ಇದ್ದಾರೆ. ಮತದಾರರ ಪಟ್ಟಿಯ ಲಿಂಗಾನುಪಾತ 1048 ಇದೆ. ಒಟ್ಟು 13755 ವಿಕಲಚೇತನರು ಹಾಗೂ 233 ಅನಿವಾಸಿ ಭಾರತೀಯರು ಮತದಾರರ ಪಟ್ಟಿಯಲ್ಲಿ ಇದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.ಸಭೆಯ ಬಳಿಕ ವೀಕ್ಷಕರಾದ ಡಾ. ಬಿ.ಆರ್. ಮಮತಾ ಅವರು ಬೆಳ್ತಂಗಡಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗಳ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಯುವ ಮತದಾರರ ಸೇರ್ಪಡೆ ಹಾಗೂ ಮೃತ ಮತದಾರರ ಹೆಸರು ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪುನರ್ ಪರಿಶೀಲಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಮತ್ತು ಮೇಲ್ವಿಚಾರಕರಿಗೆ ನಿರ್ದೇಶಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles