24.5 C
Karnataka
Thursday, April 30, 2026

ಮಕ್ಕಳಿಗೆ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

ಮಂಗಳೂರು,: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕøತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗೆ ತಮ್ಮ ಸ್ವಯಂದೃಢೀಕೃತ ನಕಲು ದಾಖಲೆಗಳೊಂದಿಗೆ ಮತ್ತು ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20 ರೊಳಗಾಗಿ ಅಕಾಡೆಮಿಯ ಕೇಂದ್ರ ಕಛೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
ಆಯಾ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿಯಲ್ಲಿ ಹಾಗೂ ಅಕಾಡೆಮಿಯ ಕೇಂದ್ರ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ವಿಳಾಸ (ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ ಔಟ್ ಹಿಂಭಾಗಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂ: 0836-2465490) ಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ : 8050392209, 7204396275, 9448981944 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles