25.5 C
Karnataka
Saturday, April 19, 2025

ಕ್ಯಾನ್ಸರ್‌ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವಿದೆ: ಡಾ.ದೇವದಾಸ ರೈ

ಮಂಗಳೂರು: ಕ್ಯಾನ್ಸರ್ ಬಗ್ಗೆ ಜನರಲ್ಲಿ ವ್ಯಾಪಕವಾದ ಜಾಗೃತಿ ಮೂಡಿಸುವ ಅಗತ್ಯ ವಿದೆ ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಗರ್ಭ ಕಂಠದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾದರಿಯ ಕ್ಯಾನ್ಸರ್ ನ್ನು ಪತ್ತೆ ಹಚ್ಚಿ ಗುಣಪಡಿಸಲು ಜನಜಾಗೃತಿ ಯಲ್ಲಿ ತಮ್ಮನ್ನು ತೊಡಗಿಸಿ ಕೊಂಡು ಬರುತ್ತಿದೆ ಎಂದು ಹಿರಿಯ ವೈದ್ಯರು ಹಾಗೂ ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ದೇವದಾಸ ರೈ ತಿಳಿಸಿದ್ದಾರೆ.
ಅವರು ನಗರದ ಬಲ್ಮಠ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಬಲ್ಮಠ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡ ಗರ್ಭ ಕಂಠದ ಕ್ಯಾನ್ಸರ್ ಬಗೆಗಿನ ಜಾಗೃತಿ ಕಾರ್ಯ ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಕ್ಯಾನ್ಸರ್ ನಿಂದ ಬಳಲು ತ್ತಿರುವವರ ಸಂಖ್ಯೆಯನ್ನು ಗಮನಿಸಿದಾಗ ಈ ನಿಟ್ಟಿನಲ್ಲಿ ಮಹಿಳೆಯರು, ಹದಿಹರೆಯ ದವರು,ಬಾಣಂತಿಯರು ಮಕ್ಕಳು ಸೇರಿದಂತೆ ವಿವಿಧ ವರ್ಗಗಳ ಜನ ಸಮೂಹ ಸೇರಿದಂತೆ ಎಲ್ಲಾ ಜನರನ್ನು ಎಚ್ಚರಿಸುವ ಕೆಲಸ ಆಗಬೇಕಾಗುದೆ.ಇದರೊಂದಿಗೆ ಕ್ಯಾನ್ಸರ್ ನಿಂದ ಉಂಟಾಗುವ ಸಾವಿನ ಪ್ರಮಾಣವನ್ನು ತಗ್ಗಿಸಬಹುದು ಗರ್ಭ ಕಂಠದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾದರಿಯ ಕ್ಯಾನ್ಸರ್ ನ್ನು ಲಕ್ಷಣಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಗುಣಪ ಡಿಸಬಹುದು ಎಂದು ಡಾ.ದೇವದಾಸ ರೈ ತಿಳಿಸಿದ್ದಾರೆ.
ಕ್ಯಾನ್ಸರ್ ಬಗ್ಗೆ ಆತಂಕ ಪಡಬೇಕಾಗಿಲ್ಲ ಸಾಕಷ್ಟು ಮಹಿಳೆಯರನ್ನು ಕಾಡುತ್ತಿರುವ ಗರ್ಭ ಕಂಠದ ಕ್ಯಾನ್ಸರ್ ನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡಿದರೆ ಗುಣಪಡಿಸಲು ಸಾಧ್ಯವಿದೆ ಈ ಬಗ್ಗೆ ಭಯಪಡ ಬೇಕಾಗಿಲ್ಲ ಎಂದು ಸ್ರೀರೋಗ ತಜ್ಞೆ ಡಾ.ಅಪೇಕ್ಷಾ ತಿಳಿಸಿದ್ದಾರೆ. ಅವರು ಕ್ಯಾನ್ಸರ್ ಲಕ್ಷಣಗಳು ಹರಡುವ ವಿಧಾನ ಮತ್ತು ಆರಂಭದಲ್ಲಿ ಪತ್ತೆ ಹಚ್ಚುವ ವಿಧಾನಗಳ ಬಗ್ಗೆ ವಿದ್ಯಾರ್ಥಿನಿ ಯರಿಗೆ ಮಾಹಿತಿ ನೀಡಿದರು.
ಬಲ್ಮಠ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಜಗದೀಶ್ ಬಾಳಾ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಉದ್ಘಾಟನಾ ಸಮಾರಂಭದಲ್ಲಿ ರೋಟರಿ ಜಿಲ್ಲೆ 3181ಇದರ ಅಸಿಸ್ಟೆಂಟ್ ಗವರ್ನರ್ ಕೃಷ್ಣ ಹೆಗ್ಡೆ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ , ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಇದರ ಕಾರ್ಯ ದರ್ಶಿರಾಜೇಶ್ ಸೀತಾರಾಮ್ ಸದಸ್ಯರಾದ ಪ್ರದೀಪ್ ಕುಲಾಲ್ ,ಜಗನ್ನಾಥ ಶೆಟ್ಟಿ,ಜ್ಯಾಕ್ಸನ್ ಸಲ್ದಾನ,ಬಲ್ಮಠ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಅಧಿಕಾರಿ ಡಾ.ಮೀನಾಕ್ಷಿ ಆಚಾರ್ಯ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಹೃಷಿಕಾ ಮತ್ತು ಕೃಪಾಶ್ರೀ ಮೊದಲಾದವರು ಉಪಸ್ಥಿತರಿದ್ದರು.ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಇದರ ಅಧ್ಯಕ್ಷ ರಾದ ಬ್ರಾಯನ್ ಪಿಂಟೋ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಸುಮನಾ ವಂದಿಸಿದರು. ರಾಷ್ಟ್ರೀಯ ಸೇವಾಯೋಜನೆಯ ಧನ್ಯಶ್ರೀ ಮತ್ತು ವರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles