ಮಂಗಳೂರು: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಗರದ ಎಸ್‍ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್‍ನ ಸಂಯುಕ್ತಾಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ- ಮಾರ್ಚ್ 15ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ನಗರದ ಎಸ್.ಡಿ.ಎಂ ಕಾನ್ಫರೆನ್ಸ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷ ಪ್ರಕಾಶ್ ಕೆ. ಕಾರ್ಯಕ್ರಮ ಉದ್ಘಾಟಿಸುವರು.
