24.9 C
Karnataka
Thursday, April 30, 2026

ಮಾ.4 ರಂದು ವಿಶ್ವ ಶ್ರವಣ ದಿನಾಚರಣೆ

ಮಂಗಳೂರು : ಯುವ ರೆಡ್ ಕ್ರಾಸ್ ಮಂಗಳೂರು ವಿ.ವಿ., ಫಾದರ ಮುಲ್ಲರ್ ಮೆಡಿಕಲ್ ಕಾಲೇಜಿನ ಸ್ಪೀಚ್ ಮತ್ತು ಹಿಯರಿಂಗ್ ವಿಭಾಗ, ಸೈಂಟ್ ಆಗ್ನೆಸ್ ( ಸ್ವಾಯತ್ತ) ಕಾಲೇಜು ಇವುಗಳ ಸಹಯೋಗದಲ್ಲಿ ಮಾ.4 ರಂದು ಬೆಳಗ್ಗೆ 10.30ಕ್ಕೆ ಸೈಂಟ್ ಆಗ್ನೆಸ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಶ್ರವಣ ದಿನಾಚರಣೆ, ಶ್ರವಣ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸೈಂಟ್ ಆಗ್ನೆಸ್ ಕಾಲೇಜಿನ ಉಪ ಪ್ರಾಂಶುಪಾಲೆ ಸಿ.ರೂಪಾ ರಾಡ್ರಿಗಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಫಾದರ್ ಮುಲ್ಲರ್ ಕಾಲೇಜ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್ ನ ಪ್ರಾಂಶುಪಾಲೆ ಪ್ರೊ.ಸಿಂತಿಯಾ ಸಾಂತಮಯರ್ ಮತ್ತು ಆಡಿಯಾಲಜಿ ವಿಭಾಗದ ಮುಖ್ಯಸ್ಥೆ ಪ್ರೊ.ಪ್ರಶಾಂತಿ ಪೂವಯ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ.ಯ ನೋಡಲ್ ಅಧಿಕಾರಿ ಡಾ.ಗಾಯತ್ರಿ. ಎನ್.‌ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles