20.4 C
Karnataka
Tuesday, November 19, 2024

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ

ಮಂಗಳೂರು * ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ​​ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ ಗೊಂಡಿದ್ದಾರೆ.

ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿಗೆ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಅಭಿನಂದನಾ ಪತ್ರದ ಮೂಲಕ ತಿಳಿಸಿದ್ದಾರೆ.

ಸಹಕಾರಿ ರಂಗದಲ್ಲಿ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ , ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್ ) ಗೆ ಘನತೆ, ಗೌರವವನ್ನು ತಂದುಕೊಟ್ಟ ಡಾ. ಎಂ ಎನ್.ರಾಜೇಂದ್ರ ಕುಮಾರ್ ಕಳೆದ 30 ವರ್ಷಗಳಿಂದ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಗೈದ ನಿಸ್ವಾರ್ಥ ನಾಯಕತ್ವವನ್ನು ಗುರುತಿಸಿ ಇವರಿಗೆ ನ.27 ರಂದು ಬೆಂಗಳೂರು ನಗರದ ಜೆ.ಸಿ.ರಸ್ತೆ ಯಲ್ಲಿರುವ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಎಸ್ ಸಿಡಿಸಿಸಿ ಬ್ಯಾಂಕ್ ಮೂಲಕ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿರುವ ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್ ನ್ನು ‘ ಜನಸ್ನೇಹಿ’ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವರು. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟ ಇವರು ಕೋರ್ ಬ್ಯಾಂಕಿಂಗ್ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್ ಸಿಡಿಸಿ ಸಿ ಬ್ಯಾಂಕ್ ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಹೆಗ್ಗಳಿಕೆಗೂ ಪಾತ್ರರಾಗಿರುವರು. ಮೊಬೈಲ್ ಬ್ಯಾಂಕ್ ನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದು.

ಸಹಕಾರ , ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ… ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು . ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಇವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ. ಇವರ ಸಾಮಾಜಿಕ ಸ್ಪಂದನೆಯ ಕಾರ್ಯಗಳನ್ನು ಪರಿಗಣಿಸಿ ಇವರಿಗೆ ಹಲವಾರು ರಾಷ್ಟ್ರೀಯ – ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

ಪ್ರಶಸ್ತಿಗಳ ಸರಮಾಲೆ : ಮುಖ್ಯವಾಗಿ ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯದಿಂದ ‘ ಗೌರವ ಡಾಕ್ಟರೇಟ್ ‘ ಪದವಿ , ಕರ್ನಾಟಕ ಸರಕಾರದಿಂದ ‘ ಸಹಕಾರ ರತ್ನ ‘ ಲಭಿಸಿದೆ. ಮಾತ್ರವಲ್ಲ ‘ ಸಹಕಾರ ವಿಶ್ವ ಬಂಧುಶ್ರೀ ‘ , ‘ ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ ‘, ‘ ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ ‘ , ‘ ಬೆಸ್ಟ್ ಚೇರ್ ಮೆನ್ ನ್ಯಾಷನಲ್ ಎವಾರ್ಡ್ ‘ , ‘ ನ್ಯಾಷನಲ್ ಎಕ್ಸ್ ಲೆನ್ಸ್ ಎವಾರ್ಡ್ ‘ , ‘ ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಎವಾರ್ಡ್ ‘ , ‘ ಬಹು ಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ, ಅಂತಾರಾಷ್ಟ್ರೀಯ ಶ್ರೇಷ್ಠ ನಾಯಕತ್ವ ಎವಾರ್ಡ್, ಅಂತಾರಾಷ್ಟ್ರೀಯ ಸಾಧಕ ಪ್ರಶಸ್ತಿ , ಮದರ್ ತೆರೆಸಾ ಮೆಮೊರಿಯಲ್ ನ್ಯಾಶನಲ್ ಎವಾರ್ಡ್ ಹಾಗೂ ಏಶ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ನಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ , ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಸಂದಿವೆ. ಎಸ್ ಸಿಡಿಸಿಸಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಡಾ. ಎಂ. ಎನ್. ರಾಜೇಂದ್ರ ಕುಮಾರ್. ಇವರು ಅಧ್ಯಕ್ಷರಾದ ಬಳಿಕ ಎಸ್ ಸಿಡಿಸಿಸಿ ಬ್ಯಾಂಕಿಗೆ 22 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 19 ಬಾರಿ ನಬಾರ್ಡ್ ಪ್ರಶಸ್ತಿ , 3 ಬಾರಿ ಬ್ಯಾಂಕಿಂಗ್ ಪ್ರೋಂಟಿಯರ್ಸ್ ಪ್ರಶಸ್ತಿ ಹಾಗೂ 4 ಬಾರಿ ಎಪಿವೈ ರಾಷ್ಟ್ರೀಯ ಪ್ರಶಸ್ತಿಯೂ ಲಭಿಸಿದೆ .

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles