32.3 C
Karnataka
Friday, May 8, 2026

ವಿಶ್ವ ರೆಡ್‌ಕ್ರಾಸ್ ದಿನಾಚರಣೆ

ಮಂಗಳೂರು : ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್‌ಕ್ರಾಸ್ ಸಂಸ್ಥೆ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕ ಬಡವರಿಗೆ ತುರ್ತು ಸಂದರ್ಭ ಉಚಿತವಾಗಿ ರಕ್ತ ಪೂರೈಸಲು ಮುಂದಾಗಿದ್ದು ಸಾರ್ವಜನಿಕ ಸಂಘ, ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರೆಡ್‌ಕ್ರಾಸ್‌ನ ಮಾನವೀಯ ಸೇವೆಗೆ ಸಹಕರಿಸಬೇಕು ಎಂದು ಶಾಸಕರು ವಿನಂತಿಸಿದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಯೂತ್ ರೆಡ್‌ಕ್ರಾಸ್ ವಿಚಾರ ಸಂಕಿರಣದಲ್ಲಿ ಸುರತ್ಕಲ್ ಎನ್‌ಐಟಿಕೆಯ ಸಹ ಪ್ರಾಧ್ಯಾಪಕಿ ಡಾ.ರಶ್ಮಿ ಸುಧೀರ್ ಉಚ್ಚಿಲ್ ಮತ್ತು ಡಿ ಅಡಿಕ್ಷನ್ ಸಮಾಲೋಚಕಿ ಡಾ.ಕುಸುಮ್ ತಂತ್ರಿ ಡೆಸಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ನಿರ್ದೇಶಕರಾದ ಡಾ.ಸತೀಶ್ ರಾವ್, ಪಿ.ಬಿ.ಹರೀಶ್ ರೈ, ರಾಘವೇಂದ್ರ ರಾವ್ ಉಪಸ್ಥಿತರಿದ್ದರು. ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ .ಬಿ. ಸ್ವಾಗತಿಸಿ, ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯಂತ್ರಿ.ಎನ್. ವಂದಿಸಿದರು. ವಿದ್ಯಾರ್ಥಿನಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಯೂತ್ ರೆಡ್‌ಕ್ರಾಸ್ ವಿಚಾರ ಸಂಕಿರಣದಲ್ಲಿ ನಡೆದ ಯೂತ್ ರೆಡ್‌ಕ್ರಾಸ್ ವಿಚಾರ ಮಂಡನೆ ಸ್ಪರ್ಧೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

  • ವಿಚಾರ ಮಂಡನೆ ಸ್ಪರ್ಧಾ ವಿಜೇತರು
    ಪ್ರಥಮ : ಸುನೈನಾ (ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ), ದ್ವಿತೀಯ : ಝೀನತ್ ಝುಲ್ಫಾ (ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜ್, ಮಂಗಳೂರು), ತೃತೀಯ : ಕೌಶಿಕ್ ( ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು)

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles