33 C
Karnataka
Tuesday, May 5, 2026

ಮೇ 8ರಂದು ವಿಶ್ವ ರೆಡ್‌ಕ್ರಾಸ್ ದಿನಾಚರಣೆ






ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಮೇ  8 ರಂದು ಬೆಳಗ್ಗೆ ೧೦ಕ್ಕೆ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ನಡೆಯಲಿದೆ. ಇದೇ ಸಂದರ್ಭ ಯೂತ್ ರೆಡ್‌ಕ್ರಾಸ್ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್, ಸುರತ್ಕಲ್ ಎನ್‌ಐಟಿಕೆಯ ಸಹ ಪ್ರಾಧ್ಯಾಪಕಿ ಡಾ.ರಶ್ಮಿ ಸುಧೀರ್ ಉಚ್ಚಿಲ್, ಡಿ ಅಡಿಕ್ಷನ್ ಸಮಾಲೋಚಕಿ ಡಾ.ಕುಸುಮ್ ತಂತ್ರಿ ಡೆಸಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ .ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles