26.5 C
Karnataka
Saturday, November 23, 2024

ಫೆ. 25ರಂದು ಲಿಖಿತಾ ಪರೀಕ್ಷೆ: ಸೂಚನೆ

ಮಂಗಳೂರು : 2022-23ನೇ ಸಾಲಿನ ಪೋಲೀಸ್ ಕಾ‌ನ್‌ ಸ್ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ, ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿ¸ಬೇಕು.
ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಅರ್ಧ ತೋಳಿನ ಶರ್ಟ್ ಕಡ್ಡಾಯವಾಗಿ ಧರಿಸುವುದು, ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು ದೊಡ್ಡ ಬಟನ್ ಇರುವ ಶರ್ಟ್ ನಿಷೇಧ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟುಗಳನ್ನು ಧರಿಸುವಂತಿಲ್ಲ. ಪರೀಕ್ಷೆ ಕೇಂದ್ರದೊಳಗೆ ಶೂ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ
ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು, ಅಥವಾ ಬಟನ್‍ಗಳು, ಹೊಂದಿರುವ ಬಟ್ಟೆ ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಜೀನ್ಸ್ ಪ್ಯಾಂಟ್‍ಗಳನ್ನು ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ ಮತ್ತು ದಪ್ಪವಾದ ಅಡಿಭಾಗ ಹೊಂದಿರುವ ಪಾದರಕ್ಷೆ ನಿಷೇಧಿಸಲಾಗಿದೆ.ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸಬೇಕು. ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಮಂಗಳೂರು ನಗರ ಪೋಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles