ಸುರತ್ಕಲ್ :ಯಕ್ಷ ಶಿಕ್ಷಣ ದೇವರ ಪೂಜೆಗೆ ಸಮಾನ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ 40 ಸರಕಾರಿ ಶಾಲೆಗಳ 4 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣ ನೀಡಲಾಗುತ್ತಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಜಿಲ್ಲೆಯ ಅಗಮಾನ್ಯ ಯಕ್ಷಗಾನ ಗುರುಗಳಲ್ಲಿ ಒಬ್ಬರಾಗಿದ್ದಾರೆ, ” ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಹೇಳಿದರು.
ಸುರತ್ಕಲ್ ಬಂಟರ ಸಂಘ ವತಿಯಿಂದ ನಡೆಯುತ್ತಿರುವ ಯಕ್ಷಸಿರಿ ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಕಟ್ಲ ಪ್ರಾಸ್ತಾವಿಕ ಮಾತನಾಡಿದರು.
ಸಂಘದ ನಿಕಟ ಪೂರ್ವಾಧ್ಯಕ್ಷ ಸುಧಾಕರ್ ಎಸ್. ಪೂಂಜ, ಮಾಜಿ – ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಕೇಸರಿ ಎಸ್.ಪೂಂಜ, ಜಗನ್ನಾಥ ಶೆಟ್ಟಿ ಬಾಳ, ಯಕ್ಷಸಿರಿ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಯಕ್ಷಮಿತ್ರರು ಸುರತ್ಕಲ್ ಇದರ ಅಧ್ಯಕ್ಷ ಜಗದೀಪ್ ಶೆಟ್ಟಿ, ಉದ್ಯಮಿಗಳಾದ ಪುಂಡಲೀಕ್ ಹೊಸಬೆಟ್ಟು, ಹರೀಶ್ ಶೆಟ್ಟಿಪೆರ್ಮುದೆ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಎ, ಶೆಟ್ಟಿ, ಯಕ್ಷಗುರು ರಾಕೇಶ್ ರೈ ಅಡ್ಕ, ಬಂಟರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪುಷ್ಪರಾಜ ಶೆಟ್ಟಿ ಮಧ್ಯ, ಅವಿನಾಶ್ ಶೆಟ್ಟಿ, ಜಯರಾಮ್ ಶೆಟ್ಟಿ ಮತ್ತಿತರರಿದ್ದರು.
ಕೇಂದ್ರದ ವಿದ್ಯಾರ್ಥಿಗಳು ಹಾಗೂ ಇತರ ಕಲಾವಿದರಿಂದ ಮಾತೃಕಾ ಮಹಿಮೆ ಯಕ್ಷಗಾನ ಬಯಲಾಟ ನಡೆಯಿತು. ಲೀಲಾಧರ ಶೆಟ್ಟಿ ಸ್ವಾಗತಿಸಿ, ಜಯರಾಮ ಶೆಟ್ಟಿ ವಂದಿಸಿದರು. ಅಕ್ಷತಾ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರ್ವಹಿಸಿದರು