ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ , ಯಕ್ಷಮಿತ್ರರು ಸಂಸ್ಥೆಯ ಅಧ್ಯಕ್ಷ ಜಗದೀಪ್ ಶೆಟ್ಟಿ, ಪೆರ್ಮುದೆ ದಿವ್ಯರೂಪ ಕನ್ ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಯಾದವ ಕೋಟ್ಯಾನ್, ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಶಕುಂತಳಾ ರಮಾನಂದ ಭಟ್, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಪುಂಡಲೀಕ ಹೊಸಬೆಟ್ಟು, ಸಹನಾ ರಾಜೇಶ್ ರೈ ಮೊದಲಾದವರು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜಿ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಬಾಳ ಜಗನ್ನಾಥ ಶೆಟ್ಟಿ, ಕೇಸರಿ ಪೂಂಜ, ಯಕ್ಷಸಿರಿ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಅವರನ್ನು ಗೌರವಿಸಲಾಗುವುದು. ಸಂಜೆ 5 ಗಂಟೆಗೆ ಯಕ್ಷಸಿರಿಯ ಕಲಾವಿದರ ರಂಗಪ್ರವೇಶ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ “ಮಾತೃಕಾ ಮಹಿಮೆ” ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 7 ಗಂಟೆಗೆ ಸಭಾಕಾರ್ಯಕ್ರಮ ಜರಗಲಿದೆ ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.