ಮ೦ಗಳೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06249/06250 ಯಶವಂತಪುರ–ಮಡಗಾಂವ್–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಒಂದು ಟ್ರಿಪ್ ಓಡಿಸಲಿದೆ.
ರೈಲು ಸಂಖ್ಯೆ 06249 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 5:30 ಗಂಟೆಗೆ ಮಡಗಾಂವ್ ತಲುಪಲಿದೆ.ಮತ್ತೆ ಮರಳುವಾಗ, ರೈಲುಸಂಖ್ಯೆ 06250 ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1 ರಂದು ಬೆಳಿಗ್ಗೆ 6:30 ಗಂಟೆಗೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ.
ಈ ರೈಲು 16 ಬೋಗಿಗಳನ್ನು (10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ,
ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.


