23.8 C
Karnataka
Tuesday, November 19, 2024

ಯೋಗ ದಿನಾಚರಣೆ : ಕೈಪಿಡಿ ಬಿಡುಗಡೆ

ಮಂಗಳೂರು:ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇದಕ್ಕೆ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಯುಷ್ಇಲಾಖೆ, ದೇಲಂಪಾಡಿ ಯೋಗ ಪ್ರತಿಷ್ಠಾನದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2024 ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ವಿವಿಧ ಯೋಗ ಸಂಘಟನೆಗಳು, ಆಯುಷ್ ಕಾಲೇಜುಗಳು ತರಬೇತಿಗಳನ್ನು ಆರಂಭಿಸಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಂತೆ ಹೇಳಿದರು. ಈ ಸಂದರ್ಭದಲ್ಲಿ ಪ್ರೊಬೆಷನರ್ ಐ.ಎ.ಎಸ್ ಅಧಿಕಾರಿ .ಪಿ.ಶ್ರವಣ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್.ಕೆ, ದೇಲಂಪಾಡಿ ಯೋಗ ಪ್ರತಿಷ್ಠಾನದ ಗೋಪಾಲಕೃಷ್ಣ ದೇಲಂಪಾಡಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles