24.3 C
Karnataka
Thursday, April 30, 2026

ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಯೋಗ ವಿತ್ ಯೋಧ ’ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ’ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಾರ್ವಜನಿಕರಿಗೆ ಆಹ್ವಾನ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ರಲ್ಲಿ ಪ್ರಸ್ತಾವನೆ ಮಾಡಿದ ನಂತರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂ.21 ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು. ಅದರಂತೆ ಈ ಬಾರಿಯ ಆಚರಿಸಲಾಗುತ್ತಿರುವ 11ನೇ ವಿಶ್ವ ಯೋಗ ದಿನದ ಥೀಮ್ ʼಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ(Yoga for One Earth, One Health)ʼ ಆಗಿದ್ದು, ನಮ್ಮ ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಅಭ್ಯಾಸ. ಅದರಂತೆ ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ‘ಯೋಗ ವಿತ್ ಯೋಧ’ ಕಾರ್ಯಕ್ರಮವನ್ನು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಸಾಹಸ ಜಲಕ್ರೀಡೆಗಳ ತಾಣವಾಗಿರುವ ಸಸಿಹಿತ್ಲುವಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಕಡಲ ಕಿನಾರೆಯಲ್ಲಿ ಯೋಗಾಭ್ಯಾಸ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ಕ್ಯಾ. ಚೌಟ ಅವರು ತಿಳಿಸಿದ್ದಾರೆ.

ಯೋಗ ವಿತ್ ಯೋಧ ’ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧಕರು, ಕ್ರೀಡಾ ಸಿಬ್ಬಂದಿ, ಮಾಜಿ ಸೈನಿಕರು, ಜೀವರಕ್ಷಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಇತರ ಗಣ್ಯರು ಭಾಗವಹಿಸಿಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು ಎಂದು ಕ್ಯಾ. ಚೌಟ ಹೇಳಿದ್ದಾರೆ.


Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles